ಬಾಗಲಕೋಟೆ
ಬಾಗಲಕೋಟೆಯು ಕರ್ನಾಟಕದ ಒಂದು ಜಿಲ್ಲಾ ಕೇಂದ್ರ. ಈ ಜಿಲ್ಲೆಯು ಉತ್ತರ ಕರ್ನಾಟಕದಲ್ಲಿ ಸ್ಥಿತವಾಗಿದೆ ಮತ್ತು ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಿಜಾಪುರಗಳೊಂದಿಗೆ ತನ್ನ ಗಡಿಯನ್ನು ಹೊಂದಿದೆ. ೧೯೯೭ರಲ್ಲಿ ಭಾರತದ ೫೦ನೆಯ ಸ್ವಾತಂತ್ರ್ಯೋತ್ಸವದ ಸ್ಮರಣೀಯ ಘಟ್ಟದಲ್ಲಿ ಕರ್ನಾಟಕ ಸರ್ಕಾರದ ಪ್ರಕಟಣೆ ಆರ್ಡಿ ೪೨ ಎಲ್ಆರ್ಡಿ ೮೭ ಭಾಗ ೩ ನಿರ್ದೇಶದ ದ್ವಾರಾ ಹೊಸ ಜಿಲ್ಲೆಯಾಗಿ ಅಂದಿನ ಮುಖ್ಯಮಂತ್ರಿ ಮಾನ್ಯ ಜೆ.ಎಚ್.ಪಟೇಲರಿಂದ ಉದ್ಘಾಟಿಸಲ್ಪಟ್ಟಿತು. ಐತಿಹಾಸಿಕವಾಗಿ ಬಾಗಲಕೋಟೆ ಜಿಲ್ಲೆಯು ಚಾಲುಕ್ಯರಾಳಿದ ನಾಡು. ಬಾದಾಮಿ, ಐಹೊಳೆ, ಪಟ್ಟದಕಲ್ಲು, ಕೂಡಲಸಂಗಮಗಳು ಇಲ್ಲಿಯ ಅತ್ಯಂತ ಪ್ರಮುಖ ಪ್ರೇಕ್ಷಣೀಯ ಸ್ಥಳಗಳು.
ವಿಕೀಪಿಡಿಯ