Homeಭಗವದ್ಗೀತೆ ಶ್ಲೋಕ |  Contact UsGoogle+
Bhagavad Gita
ಹಿಂದೂ ಧರ್ಮ ವೇದ ಉಪನಿಷತ್ ಮಹಾಕಾವ್ಯಗಳು ಭಗವದ್ಗೀತೆ ಪುರಾಣಗಳು ಭಗವದ್ಗೀತೆ ಶ್ಲೋಕ ಪಂಚಾಂಗ Other Links
 
 
 

ಅಥರ್ವವೇದ

ಅಥರ್ವವೇದಹಿಂದೂ ಧರ್ಮದ ನಾಲ್ಕು ವೇದಗಳಲ್ಲಿ ಕೊನೆಯದು.ಅಥರ್ವಣ ಅಂಗೀರಸ ಋಷಿಗಳು ರಚಿಸಿದ ಮಂತ್ರಗಳಿಂದ ಕೂಡಿದ ವೇದವಾದುದರಿಂದ ಈ ಹೆಸೆರು.ಇದರಲ್ಲಿ ೨೦ ಕಾಂಡಗಳೂ,೭೬೦ ಸೂಕ್ತಗಳೂ,೬೦೦೦ ಮಂತ್ರಗಳೂ ಇವೆ.ಗದ್ಯ ಹಾಗೂ ಪದ್ಯ ಎರಡೂ ಶೈಲಿಯಲ್ಲಿ ರಚಿತವಾಗಿದೆ.ಈ ವೇದದಲ್ಲಿ ವಿವಾಹ ಪದ್ಧತಿ,ಶವಸಂಸ್ಕಾರ,ಗೃಹನಿರ್ಮಾಣ ಮುಂತಾದ ಜನರ ದಿನನಿತ್ಯದ ಜೀವನಕ್ಕೆ ಸಂಬಂಧಿಸಿದ ವಿಚಾರಗಳು ಕೂಡಾ ಸೇರಿಕೊಂಡಿದೆ.ಮಾಟ ಮಂತ್ರ,ಯಕ್ಷಿಣಿವಿದ್ಯೆ,ಇಂದ್ರಜಾಲ ಮುಂತಾದವುಗಳೂ ವಿಸ್ತಾರವಾಗಿ ಪ್ರಸ್ತಾಪಿಸಲ್ಪಟ್ಟಿದೆ.ಧನುರ್ವಿದ್ಯೆ,ರೋಗನಿವಾರಣೋಪಾಯ,ಔಷಧಿಗಳ ವಿವರ ಕೂಡಾ ಇದರಲ್ಲಿದೆ.ಯಜ್ಞಯಾಗಾದಿಗಳನ್ನು ನಿರ್ವಹಿಸುವ ಕ್ರಮದ ವಿವರಗಳೂ ಸೇರಿದೆ.